CrimeKannada NewsKarnataka NewsLatest

ಕಾರಿನೊಳಗೆ ವ್ಯಕ್ತಿಯ ಶವ, ಪಕ್ಕದಲ್ಲೇ ಬುಲೆಟ್ ಪತ್ತೆ: ನಿಗೂಢ ಸಾವಿನ ಹಿಂದಿನ ರಹಸ್ಯವೇನು?

ಪ್ರಗತಿವಾಹಿನಿ ಸುದ್ದಿ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಕಾರಿನ ಮುಂದಿನ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲೇ ಬುಲೆಟ್ ಕೂಡ ಸಿಕ್ಕಿದೆ. ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ನಿಗೂಢವಾಗಿದೆ.

ಬೆಂಗಳೂರಿನ ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಬಾಗಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಬುಲೆಟ್ ಸೇರಿದಂತೆ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಮರಣದ ಹಿಂದಿನ ನಿಖರ ಕಾರಣ ಮತ್ತು ವ್ಯಕ್ತಿಯ ಗುರುತು ಪತ್ತೆಯಾದ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Related Articles

Back to top button