ಪ್ರಗತಿವಾಹಿನಿ ಸುದ್ದಿ: ಮಹಿಳೆಯರಿಗಾಗಿ ಲಖ್ ಪತಿ ದೀದಿ ಯೋಜನೆ ಆರಂಭಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗುವುದು.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ