
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದ್ದು, ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡು ಬರುತ್ತಿವೆ. ಗ್ರಾಮೀಣ ಪ್ರದೇಶದ ಜನರ ಆದಾಯವೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ. ಒಟ್ಟು 54 ಲಕ್ಷ ಯುವಕರಿಗೆ ಈ ಯೋಜನೆಯಲ್ಲಿ ತರಬೇತಿ ನೀಡಲಾಗುತ್ತಿದೆ. 3000 ಹೊಸ ಐಟಿಐಗಳನ್ನು ಸ್ಥಾಪಿಸಲಾಗಿದೆ.
ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹತ್ತು ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ