ಪ್ರಗತಿವಾಹಿನಿ ಸುದ್ದಿ:
ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮಧ್ಯಂತರ ಬಜೆಟ್ ಭಾಷಣದಲ್ಲಿ ಮಾತನಾಡಿದ ಸಚಿವರು, ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನಂತೆಯೇ ಮುಂದುವರೆಯಲಿದೆ ಎಂದು ಸ್ಪಷ್ಟ ಪಡಿಸಿದರು.
ಮಾರುಕಟ್ಟೆಗಳಿಂದ ಹೆಚ್ಚಿನ ಹಣ ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕರ ಅವಕಾಶ ನೀಡುತ್ತದೆ. ಎಲೆಕ್ಟ್ರಿಕ್ ವಹನಗಳಿಗೆ ಉತ್ತೇಜನ ನೀಡಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ