ಪ್ರಗತಿವಾಹಿನಿ ಸುದ್ದಿ: ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈಗಗಲೇ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ನಿರ್ಮಲಾ ಸೀತಾರಾಮ್ನ್ ಮಂಡಿಸುತ್ತಿರುವ 8ನೇ ಬಜೆಟ್ ಆಗಿದೆ. ಇದೀ ದೇಶವೇ ಬಜೆಟ್ ನತ್ತ ಚಿತ್ತ ನೆಟ್ಟಿದೆ.
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ನಲ್ಲಿ ರೈತರು, ಮಹಿಳೆಯರು, ಮಧ್ಯಮವರ್ಗ, ಉದ್ಯಮ ವಲಯ, ಶಿಕ್ಷಣ, ಜನಸಾಮನ್ಯರು, ನಿರೋದ್ಯೋಗಿಗಳಿಗಾಗಿ ಯಾವೆಲ್ಲ ಯೋಜನೆಗಳು ಘೋಷಣೆಯಾಗಲಿವೆ ಎಂಬುದನ್ನು ಕಾದು ನೋಡುತ್ತಿದ್ದಾರೆ.
ಒಟ್ಟಾರೆ ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಪ್ರಮಾಣದ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಬೆಟ್ಟದಷ್ಟು ನಿರೀಕ್ಷಗಳಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ