
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಅಧಿವೇಶನ ಜನವರಿ 28ರಿಂದ ಆರಂಭವಾಗಲಿದ್ದು, ಯುನಿಯನ್ ಬಜೆಟ್ ಗೆ ಮುಹೂರ್ತ ಫಿಕ್ಸ್ ಆಗಿದೆ.
2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ನ್ನು ಫೆಬ್ರವರಿ 1ರಂದು ಸಂಸತ್ ನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಇಂದು ಪ್ರಕಟಿಸಿದೆ.
ಕೇಂದ್ರ ಬಜೆಟ್ ಅಧಿವೇಶನ ಜನವರಿ 28ರಿಂದ ಫೆಬ್ರವರಿ 2ರವರೆಗೆ ನಡೆಯಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ ಬಜೆಟ್ ಅಧ್ವೇಶನಕ್ಕೆ ಸಮ್ಮತಿ ನೀಡಿದ್ದಾರೆ. ಅಧಿವೇಶನದ ಮೊದಲ ದಿನ ಸಂಸತ್ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಮಾತನಾಡಲಿದ್ದಾರೆ. ಜನವರಿ 29ರಂದು ಆರ್ಥಿಕ ಸಮೀಕ್ಷೆ ವರದಿ ಬಿಡುಗಡೆಯಾಗಲಿದೆ.



