Belagavi NewsBelgaum NewsKannada NewsKarnataka NewsLatestPolitics

*ನವ ಭಾರತ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್; ಸಂಸದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಸಂಸತ್ತಿನಲ್ಲಿ ಮಂಡನೆ ಮಾಡಿರುವ ಬಜೆಟ್ ಆತ್ಮ ವಿಶ್ವಾಸ ತುಂಬುವ ಭರವಸೆಯಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ದೇಶದ ಕೃಷಿ, ಸಾರಿಗೆ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ‘ವಿಕಸಿತ ಭಾರತದ ಕನಸನ್ನು’ ಸಾಕಾರಗೊಳಿಸುವ ಮಹತ್ವಾಕಾಂಕ್ಷೆಯ ಬಜೆಟ್ ಮಂಡಿಸುವುದರೊಂದಿಗೆ ಸತತ 6 ಬಾರಿ ಬಜೆಟ್ ಮಂಡಿಸಿದ ಆರ್ಥಿಕ ತಜ್ಞತೆಯ ದಿಟ್ಟ ಮಹಿಳೆಯಾಗಿ ರಾಷ್ಟ್ರ ರಾಜಕಾರಣದಲ್ಲಿ ದಾಖಲೆ ಬರೆದಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು.

ಪ್ರಧಾನಿ ಮೋದಿ ಅವರ ಸರ್ಕಾರವು ದೇಶದ ಆರ್ಥಿಕತೆ ಸುಭದ್ರವಾಗಿಸಿ, ನವ ಭಾರತ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್ ಮಂಡಿಸಿದೆ. ಜನಸಾಮಾನ್ಯರಿಗೆ ಭರವಸೆ ಮೂಡಿಸುವ ಮೂಲಕ ಮಹತ್ವದ ಹೆಜ್ಜೆಯಿಟ್ಟಿದೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button