
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದ್ದಾರೆ.
ನಿನ್ನೆ ನಡೆದ ಗಲಾಟೆ ಬಗ್ಗೆ ಸಂಪುಟ ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಅಲ್ಲದೆ ನಿನ್ನೆ ನಡೆದ ಗಲಾಟೆ ಯಾಕಾಗಿದೆ ಯಾರು ಕಾರಣಿಕರ್ತರು, ಅವರ ಉದ್ದೇಶ ಏನಿದೆ..? ಅನ್ನೋದನ್ನ ತನಿಖೆ ಮಾಡಿ ವರದಿ ಕೊಡಲು ಹೇಳಿದ್ದೇನೆ ಎಂದಿದ್ದಾರೆ.
ಎಸ್‌ಐಟಿ ತನಿಖೆ ನಡೆಯುತ್ತಿರುವ ಸಮಯದಲ್ಲಿ ಧರ್ಮಸ್ಥಳದಲ್ಲಿ ಸಂಭವಿಸುತ್ತಿರುವ ಗಲಾಟೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಹ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ