*ಇಂದು 6ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ವಿತ್ತ ಸಚಿವೆ; ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಆಯವ್ಯಯ ಮಂಡನೆ ಮಾಡಲಿದ್ದಾರೆ.
ಹಣಕಾಸು ಸಚಿವೆಯಾಗಿ ನಿರ್ಮಾಲಾ ಸೀತಾರಾಮನ್ ಮಂಡಿಸುತ್ತಿರುವ 6ನೇ ಬಜೆಟ್ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಇದಾಗಿದೆ.
ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಮಾಡಲಿದ್ದಾರೆ. ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಬಜೆಟ್ ಪ್ರತಿ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್ ಮಾಧ್ಯಮಗಳಿಗೆ ಬಜೆಟ್ ಪ್ರತಿ ಪ್ರದರ್ಶಿಸಿದರು.
ಮಧ್ಯಂತರ ಬಜೆಟ್ ಆಗಿದ್ದರೂ ಕೂಡ ಬಜೆಟ್ ಮೇಲೆ ಹಲವು ನಿಇರೀಕ್ಷೆಗಳಿವೆ. ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ವಿತರಿಸಲಾಗುತ್ತಿರುವ 6 ಸಾವಿರ ರೂಗಳನ್ನು 9 ಸಾವಿರಕ್ಕೆ ಏರಿಸುವ ಸಾಧ್ಯತೆ ಇದೆ. ನರೇಗಾ ಯೋಜನೆಗೆ ಹೆಚ್ಚಿನ ಹಂಚಿಕೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚಿನ ವಿಮೆ ರಕ್ಷಣೆ , ರೈತರು, ಕಾರ್ಮಿಕರು, ಬಡವರಿಗೆ ನಿರುದ್ಯೋಗಿಗಳಿಗೆ ಹಾಗೂ ಪ್ರತಿಯೊಂದು ಕ್ಷೇತ್ರದ ಜನತೆಗೂ ಕೇಂದ್ರ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ