LatestNationalPolitics

*ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಹಿ ತಿನ್ನಿಸಿ ಶುಭ ಕೋರಿದ ರಾಷ್ಟ್ರಪತಿ ಮುರ್ಮು*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ.

ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿ ಇತಿಹಾಸ ನಿರ್ಮಿಸಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಇದು ಒಂಬತ್ತನೇ ಬಜೆಟ್ ಆಗಿದ್ದು ದೇಶದ ಜನರ ಚಿತ್ತ ಕೇಂದ್ರ ಬಜೆಟ್ ನತ್ತ ನೆಟ್ಟಿದೆ.

ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ. ಬೆಳಿಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಅದಕ್ಕೂ ಮುನ್ನ ಹಣಕಾಸು ಸಚಿವಾಲಯಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಬಜೆಟ್ ಟ್ಯಾಬ್ ಪಡೆದುಕೊಂಡರು. ಕೆಂಪು ಕವರ್ ಹೊಂದಿರುವ ಬಜೆಟ್ ಟ್ಯಾಬ್ ನ್ನು ವಿತ್ತ ಸಚಿವೆ ಪ್ರದರ್ಶಿಸಿದ್ದಾರೆ.

ಬಳಿಕ ಬಜೆಟ್ ಮಂಡನೆಗೆ ಅನುಮತಿ ಪಡೆಯಲು ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಿಹಿ ತಿನ್ನಿಸಿ ಬಜೆಟ್ ಮಂಡನೆಗೆ ಶುಭಕೋರಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button