Latest

ಕೇಂದ್ರ ಬಜೆಟ್ ಮಂಡನೆಗೆ ರಾಷ್ಟ್ರಪತಿ ಒಪ್ಪಿಗೆ; ಕರ್ನಾಟಕದ ನಿರೀಕ್ಷೆಗಳೇನು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್ ನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಮಂಡಿಸಲಿದ್ದು, ಈ ಬಾರಿ ಬಜೆಟ್ ಮೌಲ್ಯ 35 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ.

ಇದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ 10ನೇ ಬಜೆಟ್ ಆಗಿದ್ದು, ಕೊರೊನಾ ಕಾರಣದಿಂದ ಈ ಬಾರಿ ಬಜೆಟ್ ನಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಕಳೆದ 2 ವರ್ಷಗಳಿಂದ ಬಜೆಟ್ ಪ್ರತಿ ಮುದ್ರಿಸಲಾಗಿಲ್ಲ. ಈ ಬಾರಿಯೂ ಕೇಂದ್ರ ಬಜೆಟ್ ಡಿಜಿಟಲ್ ರೂಪದಲ್ಲಿರಲಿದೆ.

ಈಗಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದು, ಬಜೆಟ್ ಮಂಡನೆಗೆ ರಾಷ್ಟ್ರಪತಿ ಔಪಚಾರಿಕ ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ 90-120 ನಿಮಿಷಗಳ ಕಾಲ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರ ಬಜೆಟ್​ನಲ್ಲಿ ತೆರಿಗೆ ವಿನಾಯಿತಿ ಮಿತಿ 3 ಲಕ್ಷ ರೂಪಾಯಿಗೆ ಏರಿಸುವ ಸಾಧ್ಯತೆ ಇದೆ. ಹಿರಿಯ ನಾಗರಿಕರ ಆದಾಯದ ಮೇಲೆ ತೆರಿಗೆ ವಿನಾಯಿತಿ ನೀಡಬಹುದು. ಮೂಲ ಮಿತಿ 3 ಲಕ್ಷ ರೂ ರಿಂದ 3.5 ಲಕ್ಷ ರೂಗೆ ಏರಿಸುವ ಸಾಧ್ಯತೆ ಇದೆ. ರಿಯಲ್ ಎಸ್ಟೇಟ್ ಉದ್ಯಮ ಉತ್ತೇಜನಕ್ಕೆ ಕ್ರಮ ನಿರೀಕ್ಷೆಯಿದೆ. ತೆರಿಗೆಯಲ್ಲಿ ಹೋಮ್​ಲೋನ್ ಕಡಿತ ಮಿತಿ 2 ಲಕ್ಷ ರೂ.ಗೆ ಏರಿಕೆ ಮಾಡಬಹುದು. ಮನೆ, ನಿವೇಶನ ಖರೀದಿದಾರರಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ. ಕೃಷಿ ಸಾಲದ ಗುರಿ 18 ಕೋಟಿಗೆ ಏರಿಸುವ ಸಾಧ್ಯತೆ ಇದೆ.

ಇನ್ನು ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ್ಕೆ ಬರಬೇಕಾದ ಜಿಎಸ್‌ಟಿ ಪಾಲು, ಹೆಚ್ಚಿನ ಅನುದಾನ ಬಿಡುಗಡೆ ಸಾಧ್ಯತೆ ಇದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಹಕಾರ ಸಿಗುವ ನಿರೀಕ್ಷೆ ಇದ್ದು, ಕೃಷ್ಣಾ ಮೇಲ್ದಂಡೆ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ನಿರೀಕ್ಷೆಯಿದೆ. ಎತ್ತಿನಹೊಳೆ, ಮೇಕೆದಾಟು, ಮಹದಾಯಿ ಯೋಜನೆಗೆ ಅನುದಾನ. ಬಂದರುಗಳಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಸಾಧ್ಯತೆಯಿದೆ. ರಾಜ್ಯಕ್ಕೆ ಸಿಗಬೇಕಾದ ಬರ-ಪ್ರವಾಹ ಪರಿಹಾರದ ನಿರೀಕ್ಷೆ. ಕರ್ನಾಟಕಕ್ಕೆ ನಾಲ್ಕು ಮೆಡಿಕಲ್ ಕಾಲೇಜು ಘೋಷಣೆ ನಿರೀಕ್ಷೆ. ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ ನಿರೀಕ್ಷೆಯಿದೆ. ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ ಯೋಜನೆ. ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲ್ವೆ ಯೋಜನೆ,ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಅನುದಾನ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button