
ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11ಗಂಟೆಗೆ ಸಂಸತ್ ನಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿಯೊಂದಿಗೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿಗಳನ್ನು ಭೇಟಿಯಾಗಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಈ ವೇಳೆ ರಾಷ್ಟ್ರಪತಿಗಳು ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ತಿನ್ನಿಸಿ ಕೇಂದ್ರ ಬಜೆಟ್ ಮಂಡನೆಗೆ ಶುಭ ಕೋರಿದರು. ಬಜೆಟ್ ಮಂಡನೆಗೆ ಅನುಮತಿ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ