National

*ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರದಿಂದ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಲಿದ್ದು, ಮೊದಲ ಬಾರಿ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದಿಂದ ನೀಡಲಾಗುವುದು ಎಂದು ಘೋಷಿಸಿದರು.

ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15,000 ರೂ. ಇಪಿಎಫ್ ಒ ನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯುತ್ತಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button