Latest

ರಾಜ್ಯಸಭೆ ಚುನಾವಣೆ; ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ…? ರಜನಿಕಾಂತ್, ಖುಷ್ಬೂಗೆ ಸಿಗುತ್ತಾ ಟಿಕೆಟ್?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಭಾರಿ ಪೈಪೋಟಿ ಆರಂಭವಾಗಿದ್ದು, ಇಂದು ಬಿಜೆಪಿ ಹೈಕಮಾಂಡ್ ಅಭ್ಯರ್ಥಿ ಹೆಸರು ಘೋಷಿಸಲಿದ್ದು, ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಅಶೋಕ್ ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ರಾಜ್ಯ ಬಿಜೆಪಿ ಮೂರು ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದೆ. ಅಶೋಕ್ ಗಸ್ತಿ ಪತ್ನಿ ಸುಮಾ ಗಸ್ತಿ, ವಿಧಾನಪರಿಷತ್ ಮಾಜಿ ಸದಸ್ಯ ಶಂಕರಪ್ಪ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ ಹೆಸರನ್ನು ಶಿಫಾರಸು ಮಾಡಿದೆ.

ಆದರೆ ತಮಿಳುನಾಡಿನಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಮುಂದಾಗಿರುವ ಬಿಜೆಪಿ ವರಿಷ್ಠರು ನಟ ರಜನಿಕಾಂಟ್ ಅಥವಾ ನಟಿ ಖುಷ್ಬೂ ಅವರಿಗೆ ಟಿಕೆಟ್ ಘೋಷಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ರಾಜ್ಯ ಸಭೆ ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುವುದರಿಂದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

 

Home add -Advt

Related Articles

Back to top button