Latest

*ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ. ನಿರ್ಮಲಾ ಸೀತಾರಾಮನ್ ಹಾಗೂ ತಂಡದವರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿಯವರು, ಎಲ್ಲಾ ವರ್ಗಗಳ ಜನರ ಕನಸು ಸಾಕಾರಗೊಳಿಸುವ, ಅಭಿವೃದ್ಧಿ ಪೂರಕವಾದ ಬಜೆಟ್ ಇದಾಗಿದೆ ಎಂದರು.

ಶ್ರೀ ಅನ್ನ ಯೋಜನೆಗೆ ಪ್ರೋತ್ಸಾಹ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿ ಘೋಷಿಸಲಾಗಿದೆ. ಇದರಿಂದ ವಿಶ್ವಕರ್ಮ ಸಮುದಾಯದ ಜನರ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ವಂಚಿತ ಸಮುದಾಯಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಮಹಿಳೆಯರಿಗಾಗಿ ವಿಶೇಷ ಉಳಿತಾಯ ಠೇವಣಿ ಯೋಜನೆ ಘೋಷಿಸಲಾಗಿದೆ. ಮಧ್ಯಮವರ್ಗದವರ ಆಸೆ, ಆಕಾಂಕ್ಷೆ ಪೂರ್ಣಗೊಳಿಸುವ ಬಜೆಟ್ ಇದು. ವಿಕಸಿತ ಭಾರತದ ಕನಸು ನನಸಾಗಲಿದೆ ಎಂದು ತಿಳಿಸಿದರು.

*ಯಾವುದರ ಬೆಲೆ ದುಬಾರಿ? ಯಾವುದು ಕಡಿಮೆ?*

Home add -Advt

https://pragati.taskdun.com/union-budget-2023central-governmentnirmala-sitaraman-2/

Related Articles

Back to top button