
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ರಾಜ್ಯದ ಇಬ್ಬರು ಸಂಸದರಿಗೆ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ.
ಕೇಂದ್ರ ಸಚಿವ ಹುದ್ದೆಯಿಂದ ಡಿ.ವಿ.ಸದಾನಂದಗೌಡ ಅವರಿಗೆ ಕೊಕ್ ನೀಡಿ ಶೋಭಾ ಕರಂದ್ಲಾಜೆ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಇನ್ನು ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ ಅವರಿಗೂ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಭಾವ್ಯ ಸಚಿವರು ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ 3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ
ದೆಹಲಿ ಮೀಟಿಂಗ್ ಸಕ್ಸಸ್; ಕುತೂಹಲ ಮೂಡಿಸಿದ ಸಚಿವ ನಿರಾಣಿ ಹೇಳಿಕೆ



