Latest

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ ಎಂದ ರಾಜ್ಯಕ್ಕೆ ಕೇಂದ್ರ ಕಾನೂನು ಸಚಿವರ ಖಡಕ್ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕೇರಳ, ತೆಲಂಗಾಣ, ಪಂಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುವುದಿಲ್ಲ ಎಂದು ಪಟ್ಟುಹಿಡಿದ ಬೆನ್ನಲ್ಲೇ  ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅಂತಹ ರಾಜ್ಯಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯಿಂದ ಯಾವ ರಾಜ್ಯಗಳೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಅದು ಸಂವಿಧಾನಿಕ ಕರ್ತವ್ಯ. ಒಂದು ವೇಳೆ ಹಾಗೆ ಮಾಡಿದಲ್ಲಿ ಅದು ಸಂವಿಧಾನ ವಿರೋಧಿ ಕ್ರಮವಾಗುತ್ತದೆ ಎಂದು ತಿಳಿಸಿದ್ದಾರೆ.

ಹಲವು ರಾಜ್ಯಗಳು ಮತ ಬ್ಯಾಂಕ್ ರಾಜಕಾರಣಕ್ಕಾಗಿ  ಕಾಯ್ದೆ ಅನುಷ್ಠಾಕ್ಕೆ ಹಿಂದೆ ಸರಿಯುತ್ತಿವೆ.  ಇಂತಹ ರಾಜ್ಯಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡುತ್ತೇವೆ. ಕಾಯ್ದೆ ಬಗ್ಗೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ. ಪೌರತ್ವ ಕಾಯ್ದೆ ಜಾರಿ ಮಾಡಲು ಸಂಸತ್ತಿಗೆ ಸಂಪೂರ್ಣ ಹಕ್ಕಿದ್ದು,  ಆರ್ಟಿಕಲ್ 245 ಹಾಅಗೂ 256 ಈ ಬಾಗ್ಗೆ ಸ್ಪಷ್ಟವಾಗಿ ಹೇಳುತ್ತದೆ. ಎಲ್ಲಾ ರಾಜ್ಯ ಸರ್ಕಾರಗಳೂ ಸಂವಿಧಾನಕ್ಕೆ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಖಡಕ್ ಸಂದೇಶ ನೀಡಿದ್ದಾರೆ.

ಸಂಸತ್ತು ರಚಿಸಿದ ಯಾವುದೇ ಕಾನೂನು ಅಮಾನ್ಯವೆಂದು ಪರಿಗಣಿಸಲು ಬರುವುದಿಲ್ಲ. ಅದು ಪ್ರಾದೇಶಿಕ ಮಾನ್ಯತೆಯನ್ನು ಒಳಗೊಂಡಿರುತ್ತದೆ. ಸಂವಿಧಾನಿಕ ನಿಬಂಧನೆಗಳ ಬಗ್ಗೆ ರಾಜ್ಯಗಳು ಕಾನೂನು ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button