ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮಾಧ್ಯಮ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ರಾಜ್ಯದ ಉಸ್ತುವಾರಿ ಅರವಿಂದ ಲಿಂಬಾವಳಿ , ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ, ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಗಣೇಶ ಯಾಜಿ ಅವರು ವಂದೇ ಮಾತರಂ ಗೀತೆ ಹಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಿದರು.
ವೇದಿಕೆ ಮೇಲೆ ಸಹವಕ್ತಾರ ಹಾಗೂ ಲೋಕಸಭಾ ಚುನಾವಣೆ ಮಾಧ್ಯಮ ನಿರ್ವಹಣೆ ಸಂಚಾಲಕ ಎ.ಹೆಚ್.ಆನಂದ, ಸಹವಕ್ತಾರರುಗಳಾದ ಎಸ್.ಪ್ರಕಾಶ್, ಮಾಳವೀಕ ಅವಿನಾಶ್, ಶಶಿಲ್ ನಮೋಶಿ ಹಾಗೂ ಮಾಧ್ಯಮ ವಿಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.