*ಶೃಂಗಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರು: ಕಾರಣ ಇಲ್ಲಿದೆ*
![](https://pragativahini.com/wp-content/uploads/2023/11/hdk1.jpg)
ಪ್ರಗತಿವಾಹಿನಿ ಸುದ್ದಿ: ಸಂಸತ್ ಕಲಾಪ ನಡೆಯುತ್ತಿರುವ ಕಾರಣ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಕರ್ನಾಟಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಮ್ಮ ಸರಕಾರವು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಮೂಲಕ ವಿಕಸಿತ ಭಾರತ 2047ರ ಗುರಿ ಮುಟ್ಟುವ ನಿಟ್ಟಿನಲ್ಲಿ ಹೂಡಿಕೆಗಳಿಗೆ ಉತ್ತೇಜನ ನೀಡುವುದಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಶೃಂಗಸಭೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು. ಆವಿಷ್ಕಾರ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮಹತ್ವದ ಕೇಂದ್ರವಾಗಿರುವ ಕರ್ನಾಟಕವು ಭಾರತದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ. ಈ ಸಮಾವೇಶವು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ