
ಪ್ರಗತಿವಾಹಿನಿ ಸುದ್ದಿ: ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಕುಮಾರಸ್ವಾಮಿ ಬಳಲುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಅವರನ್ನು ಅಡ್ಮಿಟ್ ಮಾಡಲಾಗಿದೆ. ತೀವ್ರ ಒತ್ತಡದಿಂದ ಕುಮಾರಸ್ವಾಮಿ ಕೊಂಚ ಆಯಾಸಗೊಂಡಿದ್ದಾರೆ ಎನ್ನಲಾಗಿದೆ.
ಒಂದೆರೆಡು ದಿನ ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದಾರೆ. ನುರಿತ ವೈದ್ಯರ ತಂಡ ವಿವಿಧ ತಪಾಸಣೆ ನಡೆಸಿದ್ದು, ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ.
ಕೇಂದ್ರ ಸಚಿವರಾದ ಬಳಿಕ ದೇಶದ ವಿವಿಧ ಕಡೆ ಸಂಚರಿಸುತ್ತಿರುವುದರಿಂದ ಕುಮಾರಸ್ವಾಮಿಗೆ ವಿಶ್ರಾಂತಿ ದೊರೆಯುತ್ತಿಲ್ಲ. ಹೀಗಾಗಿ ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಬಹುತೇಕ ಬುಧವಾರ ಕುಮಾರಸ್ವಾಮಿ ಡಿಸ್ಟಾರ್ಜ್ ಆಗುವ ಸಾಧ್ಯತೆ ಇದೆ. ಈ ವಾರದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದ್ದು, ಮುಂದಿನ ಸೋಮವಾರದಿಂದ ಮತ್ತೆ ಇಲಾಖೆ ಕೆಲಸದಲ್ಲಿ ಕುಮಾರಸ್ವಾಮಿ ಭಾಗಿಯಾಗುವ ನಿರೀಕ್ಷೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ