Kannada NewsKarnataka NewsLatest
ಇಂದು ನಿಪ್ಪಾಣಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ.
ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.




