Kannada NewsKarnataka NewsNationalPolitics

*ಕೇಂದ್ರ ಸಚಿವರಿಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಕೇಂದ್ರದ ಸಚಿವರಿಗೆ ನಮ್ಮ ರಾಜ್ಯದ ಅಧಿಕಾರಿಗಳ ಜೊತೆ ಸಭೆ ಮಾಡುವ ಅವಕಾಶ ಇಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರೇ ಸಿಎಂ ಇದ್ದರೂ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ ಎಂದು ಹೇಳುತ್ತಾರೆ. ಕೇಂದ್ರದ ಸಚಿವರಿಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲ. ಈ ವಿಚಾರ ಹೆಚ್​.ಡಿ.ಕೆ ಗೂ ಗೊತ್ತಿದೆ ಎಂದರು. 

ಕೇಂದ್ರ ಸಚಿವರು ಕೇವಲ  ದಿಶಾ ಕಾರ್ಯಕ್ರಮದಡಿ ಸಭೆ ನಡೆಸಿ ಕೆಲ ಸೂಚನೆಗಳನ್ನು ನೀಡಬಹುದಷ್ಟೇ, ಅದು ಬಿಟ್ಟು ರಾಜ್ಯದ ಅಧಿಕಾರಿಗಳ ಜೊತೆ ಸಭೆ ನಡೆಸುವಂತಿಲ್ಲ ಎಂದು ಸ್ಪಷ್ಟನೆ ನೀಡಿದರು.  

ಇನ್ನು ಡಿಕೆ ಸುರೇಶ್ ಜನತಾ ಸಭೆ ಕರೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಸುರೇಶ್ ಕರೆದಾಗ ಎಲ್ಲರೂ ಹೋಗುತ್ತಿರಲಿಲ್ಲ,  ಕೆಲ ಅಧಿಕಾರಿಗಳು ಮಾತ್ರ ಹೋಗುತ್ತಿದ್ದರು ಎಂದು ಸಮರ್ಥಿಸಿಕೊಂಡರು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button