
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಇತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಅವರ ಭೇಟಿ ನಿಗದಿಯಾಗಿದೆ. ಬೆಳಗಾವಿಯ ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿ ಸುರೇಶ ಅಂಗಡಿ ಮನೆಯಿದೆ. ಕುಟುಂಬ ಸದಸ್ಯರನ್ನು ಭೇಟಿಯಾಗಿ ಅವರು ಸಾಂತ್ವನ ಹೇಳಲಿದ್ದಾರೆ. ನಿನ್ನೆಯಷ್ಟೆ ಈಚೆಗೆ ನಿಧನರಾಗಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಮನೆಗೂ ಪ್ರಹ್ಲಾದ ಜೋಶಿ ಭೇಟಿ ನೀಡಿದ್ದರು.
ಇದಾದ ನಂತರ ಪ್ರಹ್ಲಾದ ಜೋಶಿ ಪತ್ರಿಕಾಗೋಷ್ಠಿಯನ್ನೂ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ