*ನಾಳೆ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ಕುತೂಹಲ ಮೂಡಿಸಿದ ಸಭೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪ್ರವಾಸ ಮುಂದೂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ ಬೆಳಿಗ್ಗೆ 9:30ಕ್ಕೆ ಸಿಎಂ ಕಾವೇರಿ ನಿವಾಸಕ್ಕೆ ಭೇಟಿ ನೀಡಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲಿದ್ದು, ನಾಳೆನ ಸಿಎಂ ಭೇಟಿ ತೀವ್ರ ಮಹತ್ವ ಪಡೆದುಕೊಂಡಿದೆ.
ಇಂದು ಸಂಜೆ 7:45ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲು ಫ್ಲೈಟ್ ಬುಕ್ ಮಾಡಿದ್ದರು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ಮುಂದೂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ನಾಳೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಪೈಪೋಟಿ ಹೆಚ್ಚುತ್ತಿರುವ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಾಳಿನ ಚರ್ಚೆ ತೀವ್ರ ಕುತೂಹಲ ಮೂಡಿಸಿದೆ.
*ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ: *ಸಿಎಂ ಸಿದ್ದರಾಮಯ್ಯ*
ಬೆಂಗಳೂರು:ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಉಪಾಹಾರಕ್ಕೆ ಆಹ್ವಾನ
ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ ಎಂದರು.
ಆಹ್ವಾನ ಬಂದರೆ ದೆಹಲಿಗೆ ತೆರಳುವೆ
ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Karnataka Chief Minister Siddaramaiah and his deputy D.K. Shivakumar are set to meet for breakfast Saturday at Siddaramaiah’s official residence to discuss the ongoing leadership dispute. This meeting comes after the Congress high command instructed both leaders to hold talks and resolve their differences ahead of the winter session of the Legislative Assembly, which begins on December 8.
The power struggle between Siddaramaiah and Shivakumar has been ongoing, with Shivakumar claiming that there’s a power-sharing agreement where he would take over as Chief Minister after two-and-a-half years, which completed on November 20. However, Siddaramaiah denies any such agreement and has stated he’ll abide by the high command’s decision.
The Congress high command is expected to intervene and take a decision on the leadership issue soon. Minister Priyank Kharge, son of Congress President Mallikarjun Kharge, said the high command has the “sense of timing” to resolve the crisis.

