
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರ ಆಹಾರ ಮತ್ತು ನಾಗರಿಕರ ಪೂರೈಕೆ ಸಚಿವ ರಾಮವಿಲಾಸ್ ಪಾಸ್ವಾನ್ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಈಚೆಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್, ಅನಾರೋಗ್ಯದಿಂದ ಬಳಲುತ್ತಿದ್ದರು. 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಮಗ ಚಿರಾಗ್ ಅವರು ತಂದೆಯ ಸಾವಿನ ಸುದ್ದಿಯನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ರಾಮ್ ವಿಲಾಸ ಪಾಸ್ವಾನ್ ಲೋಕಜನ ಶಕ್ತಿ ಪಕ್ಷದ ಸಂಸ್ಥಾಪಕರು.
ಕೆಲವೇ ದಿನದ ಹಿಂದೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರನ್ನು ಕಳೆದುಕೊಂಡಿದ್ದ ಕೇಂದ್ರ ಸಚಿವಸಂಪುಟ ಈಗ ಮತ್ತೊಬ್ಬ ಸಚಿವರನ್ನು ಕಳೆದುಕೊಂಡಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ