ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರ ಆಹಾರ ಮತ್ತು ನಾಗರಿಕರ ಪೂರೈಕೆ ಸಚಿವ ರಾಮವಿಲಾಸ್ ಪಾಸ್ವಾನ್ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಈಚೆಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್,  ಅನಾರೋಗ್ಯದಿಂದ ಬಳಲುತ್ತಿದ್ದರು. 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಮಗ ಚಿರಾಗ್ ಅವರು ತಂದೆಯ ಸಾವಿನ ಸುದ್ದಿಯನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

Home add -Advt

ರಾಮ್ ವಿಲಾಸ ಪಾಸ್ವಾನ್ ಲೋಕಜನ ಶಕ್ತಿ ಪಕ್ಷದ ಸಂಸ್ಥಾಪಕರು.

ಕೆಲವೇ ದಿನದ ಹಿಂದೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರನ್ನು ಕಳೆದುಕೊಂಡಿದ್ದ ಕೇಂದ್ರ ಸಚಿವಸಂಪುಟ ಈಗ ಮತ್ತೊಬ್ಬ ಸಚಿವರನ್ನು ಕಳೆದುಕೊಂಡಂತಾಗಿದೆ.

Related Articles

Back to top button