Kannada NewsKarnataka News

ಏ.25ರಂದು ನಿಪ್ಪಾಣಿಗೆ ಕೇಂದ್ರ ಸಚಿವೆಯರಾದ ಸ್ಮೃತಿ ಇರಾನಿ ಹಾಗೂ ಅನ್ನಪೂರ್ಣಾದೇವಿ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಸ್ಥಳೀಯ ವಿಧಾನಸಭೆ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆಯವರ ಪರ ಪ್ರಚಾರಕ್ಕಾಗಿ ಮಂಗಳವಾರ, ಏ.೨೫ರಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಮತ್ತು ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯಸಚಿವೆ ಅನ್ನಪೂರ್ಣಾದೇವಿ ಆಗಮಿಸಲಿದ್ದಾರೆ.
ಸಂಜೆ ೪ ಗಂಟೆಗೆ ಇಲ್ಲಿನ ವಿದ್ಯಾ ಸಂವರ್ಧಕ ಮಂಡಳದ ಮೈದಾನದಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಅವರು ಮಹಿಳೆಯರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಅವರೊಂದಿಗೆ ಜಿಲ್ಲೆಯ ವಿವಿಧ ನೇತಾರರೂ ಸಹ ಭಾಗವಹಿಸಲಿದ್ದಾರೆ.
ಸ್ಥಳೀಯ ಮತಕ್ಷೇತ್ರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಹಿಳಾ ಮೋರ್ಚಾ ನಗರ ಘಟಕದ ಅಧ್ಯಕ್ಷೆ ಪ್ರೊ. ವಿಭಾವರಿ ಖಾಂಡಕೆ ಮತ್ತು ಗ್ರಾಮೀಣ ಘಟಕದ ಅಧ್ಯಕ್ಷೆ ಸರೋಜನಿ ಜಮದಾಡೆ ಪ್ರಕಟಣೆ ಮೂಲಕ ಕೋರಿದ್ದಾರೆ.

https://pragati.taskdun.com/more-activists-join-bjp/

Home add -Advt

Related Articles

Back to top button