
https://youtu.be/v3iIrdphUvQ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುವ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಿರುವ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು ಹರಡದಂತೆ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಮಾಸ್ಕ ಗಳನ್ನು ವಿತರಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ಮತ್ತಿತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ