ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರ ಸಚಿವ, ಬಿಜೆಪಿ ಹಿರಿಯ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಸಚಿವ ಆರ್ ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಆರ್ ಸಿಪಿ ಸಿಂಗ್ ಅವರ ರಾಜ್ಯಸಭಾ ಅವಧಿ ಗುರುವಾರಕ್ಕೆ ಮುಕ್ತಾಯವಾಗಲಿದ್ದು, ನಾಳೆ ರಾಜಿನಾಮೆ ನೀಡಬೇಕಿತ್ತು. ಆದರೆ ಒಂದು ದಿನ ಮುಂಚಿತವಾಗಿಯೇ ಸಚಿವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಬ್ಬರೂ ಸಚಿವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅಂದಹಾಗೆ ನಖ್ವಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿಯೂ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ನಖ್ವಿ ರಾಜಿನಾಮೆ ಬೆನ್ನಲ್ಲೇ ಬಿಜೆಪಿ ಉಪರಾಷ್ಟ್ರಪತಿ ಸ್ಥಾನಕ್ಕೆ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ ಎಂಬ ಚರ್ಚೆ ಕೂಡ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ನಾಳೆ ಪಂಜಾಬ್ ಸಿಎಂ ಭಗವಂತ್ ಮಾನ್ ಮದುವೆ; 2ನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಮುಖ್ಯಮಂತ್ರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ