
ಸಾರ್ವತ್ರಿಕ ವರ್ಗಾವಣೆಯನ್ನು ಆದೇಶ ವಾಪಸ್
ಪ್ರಗತಿವಾಹಿನಿ ಸುದ್ದಿ: 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು ಕೆಲವೊಂದು ಷರತ್ತು ಮತ್ತು ನಿರ್ಬಂಧಗಳಿಗೆ ಒಳಪಟ್ಟು ದಿನಾಂಕ:15.04.2026 ರಿಂದ 31.05.2026ರವರೆಗೆ ಕೈಗೊಳ್ಳಲು ಮೇಲೆ (1)ರಲ್ಲಿ ಓದಲಾದ ದಿನಾಂಕ:13.04.2026ರ ಸರ್ಕಾರಿ ಆದೇಶದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ:31.07.2026ರ ವರೆವಿಗೆ ಮೇಲೆ ಓದಲಾದ (4) ರ ಸರ್ಕಾರಿ ಆದೇಶದಲ್ಲಿ ವಿಸ್ತರಿಸಲಾಗಿರುವುದನ್ನು ಕಾರಣಾಂತರಗಳಿಂದ ಹಿಂಪಡೆಯಲು ಸರ್ಕಾರವು ತೀರ್ಮಾನಿಸಿ, ಕೆಳಕಂಡಂತೆ ಆದೇಶಿಸಿರುತ್ತದೆ.
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 4 ಸೇನೌವ 2026, ಬೆಂಗಳೂರು, ದಿನಾಂಕ:16.07.2026
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ:13.04.2026ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿರುವ ಷರತ್ತು ಹಾಗೂ ನಿರ್ಬಂಧಗಳಿಗೆ ಒಳಪಟ್ಟು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ದಿನಾಂಕ: 31.07.2026ರವರೆಗೆ ವಿಸ್ತರಿಸಿ, ಆದೇಶಿಸಿರುವ ದಿನಾಂಕ:15.07.2026ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 4 ಸೇನೌವ 2026ನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.



