Latest

ಪದವಿ, ಸ್ನಾತಕೋತ್ತರ ಪರೀಕ್ಷೆ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಪರೀಕ್ಷೆ ವಿನಾಯಿತಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದ್ದು, ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು ಕೇಂದ್ರೀಯ ವಿವಿ ಸೇರಿದಂತೆ 10ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿವೆ. ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ವರ್ಷ ಪರೀಕ್ಷೆ ನಡೆಯಲಿದ್ದು, ಸರ್ಕಾರ ಸಮ್ಮತಿ ನೀಡಿದರೆ ಜುಲೈ ಕೊನೇ ವಾರದಲ್ಲಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಂಚೆ ಕಚೇರಿಯಲ್ಲಿ ಪಿಎಲ್ಐ ಏಜೆಂಟ್ ಹುದ್ದೆಗಳಿಗೆ ನೇಮಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button