*ಚೆಕ್‌ಪೋಸ್ಟ್‌ನಲ್ಲೇ ಸಿಆರ್‌ಪಿಎಫ್ ಸಿಬ್ಬಂದಿಗೆ ಗುಂಡಿನ ದಾಳಿ*: *ಮೂವರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಭದ್ರತಾ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ಬಳಿಕ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಪರಾರಿಯಾಗಿದ್ದು, ಭದ್ರತಾ ಪಡೆಗಳು ತೀವ್ರ ಶೋಧ ಆರಂಭಿಸಿವೆ. ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 2.15ರ ವೇಳೆಗೆ ಈ ಘಟನೆ ನಡೆದಿದೆ. ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಬೈಕ್‌ನಲ್ಲಿ ಬಂದ ಅಪರಿಚಿತರು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ … Continue reading *ಚೆಕ್‌ಪೋಸ್ಟ್‌ನಲ್ಲೇ ಸಿಆರ್‌ಪಿಎಫ್ ಸಿಬ್ಬಂದಿಗೆ ಗುಂಡಿನ ದಾಳಿ*: *ಮೂವರಿಗೆ ಗಾಯ*