Latest

ಅನ್ ಲಾಕ್ 2.0: ಸಂಜೆ ಮಹತ್ವದ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ತಗ್ಗಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಅನ್ ಲಾಕ್ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.

ಇಂದು ಸಂಜೆ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಜೂನ್ 21ರಿಂದ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸಾರಿಗೆ ಸಂಚಾರ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಕೆಲ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ದಟ್ಟವಾಗಿದೆ.

ಈ ಕುರಿತು ಮಾತನಾಡಿರುವ ಸಿಎಂ, ಜೂನ್ 21ರ ಬಳಿಕ ಅನ್ ಲಾಕ್ ಮಾಡುವ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಕೊರೊನಾ ಮೂರನೇ ಅಲೆ ಬಗ್ಗೆಯೂ ಎಚ್ಚರಿಕೆ ನೀಡಿರುವುದರಿಂದ ಮುಂಜಾಗೃತೆ ಕೈಗೊಂಡು ಕೆಲ ಮಾರ್ಗಸೂಚಿಗಳನ್ನು ಅನುಸರಿಸುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದರು.

ಒಟ್ಟಾರೆ ಜೂನ್ 21ರಿಂದ ರಾಜ್ಯಾದ್ಯಂತ ಅನ್ ಲಾಕ್ 2.0 ಆರಂಭವಾಗುವ ಸಾಧ್ಯತೆ ಇದೆಯಾದರೂ ಈಗಿನಂತೆಯೇ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಗಳನ್ನು ಮುಂದುವರೆಸುವ ಸಾಧ್ಯತೆ ದಟ್ಟವಾಗಿದೆ.

Home add -Advt

ಬೆಳಗಾವಿಯಲ್ಲಿ ನದಿಯಲ್ಲಿ ಕೊಚ್ಚಿಹೋದ ರೈತ: ಶನಿವಾರವೂ ಭಾರಿ ಮಳೆ ಮುನ್ಸೂಚನೆ

20 ಜಿಲ್ಲೆಗಳ ಜೊತೆ ನಾಳೆ ಸಿಎಂ ಯಡಿಯೂರಪ್ಪ ವಿಡೀಯೋ ಸಂವಾದ

Related Articles

Back to top button