Belagavi NewsBelgaum News

*ಪರೀಕ್ಷೆಗೆ ವಸ್ತ್ರಸಂಹಿತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) (ಪುರುಷ) (ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ:28-01-2024 ರಂದು ಬೆಳಿಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.

Home add -Advt

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು.

ವಸ್ತ್ರ ಸಂಹಿತೆ:-

a. ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ ಇರುವ ಶರ್ಟಗಳನ್ನು ಧರಿಸತಕ್ಕದ್ದಲ್ಲ.

b. ಜೀನ್ಸ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟುಗಳನ್ನು ಧರಿಸತಕ್ಕದ್ದಲ್ಲ.

C. ಪರೀಕ್ಷಾ ಕೇಂದ್ರದೊಳಗೆ ಪೂಗಳನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಬಾಗವಿರುವ ಪಾದಕ್ಷೆಗಳನ್ನು (ಚಪ್ಪಲಿ) ಧರಿಸುವುದು.

d. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇದಿಸಲಾಗಿದೆ.

Related Articles

Back to top button