
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ಆರ್ಭಟಕ್ಕೆ ಕಳೆದ ಒಂದುವರೆ ತಿಂಗಳಿಂದ ಮನೆಗಳಲ್ಲೇ ಬಂಧಿಯಾಗಿದ್ದ ಜನರಿಗೆ, ವ್ಯಾಪಾರ ವಹಿವಾಟಕ್ಕೆ ರಿಲೀಫ್ ನೀಡಲು ಸರ್ಕಾರ ಮುಂದಾಗಿದ್ದು, ಜೂನ್ 21ರಿಂದ ರಾಜ್ಯಾದ್ಯಂತ ಅನ್ ಲಾಕ್-2.0 ಆರಂಭವಾಗಲಿದೆ ಎಂದು ತಿಳಿದುಬಂದಿದೆ.
ಈಗಾಗಲೇ ರಾಜ್ಯದ 19 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಆರಂಭವಾಗಿದ್ದು, ಜೂನ್ 21ರಿಂದ ರಾಜ್ಯಾದ್ಯಂತ ಅನ್ ಲಾಕ್ 2.0 ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಸಾರಿಗೆ ಸಂಚಾರದಿಂದ ಹಿಡಿದು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ.
ದಿನದ 8ಗಂಟೆಗಳ ಕಾಲ ವ್ಯಾಪಾರ ವಹಿವಾಟು, ಮಾರುಕಟ್ಟೆ, ಶಾಪಿಂಗ್ ಮಾಲ್ ತೆರೆಯಲು ಅನುಮತಿ ನೀಡಲಾಗುತ್ತಿದೆ. ಬಟ್ಟೆ ಅಂಗಡಿಗಳು, ಚಿನ್ನದ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಥಿಯೇಟರ್, ಮಾಲ್, ಜಿಮ್, ಎಲ್ಲಾ ರೀತಿಯ ವಾಣಿಜ್ಯ ಮಳಿಗೆಗಳನ್ನು ತೆರೆಯಲು ಹಾಗೂ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರಿಗೆ ಅನುಮತಿ ನೀಡಲು ಅವಕಾಶ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ