ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಇನ್ನಷ್ಟು ಸಡಿಲಿಕೆ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಜುಲೈ 5ರ ಬಳಿಕ ಅನ್ ಲಾಕ್ 3.0 ಜಾರಿ ನಿಟ್ಟಿನಲ್ಲಿ ನಾಳೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ನಾಳೆ ಸಂಜೆ 5:30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ.
ಜುಲೈ 5ರ ಬಳಿಕ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ಹಾಗೂ ನೈಟ್ ಕರ್ಫ್ಯೂ ಮಾತ್ರ ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಅಲ್ಲದೇ ಅಂಗಡಿಗಳಿಗೆ ಸಂಜೆ 5ರ ಬಳಿಕವೂ ತೆರೆಯಲು ಅವಕಾಶ, ಶಾಪಿಂಗ್ ಮಾಲ್, ಕಾಂಪ್ಲೆಕ್ಸ್, ಥಿಯೇಟರ್ ಸೇರಿದಂತೆ ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ದಟ್ಟವಾಗಿದೆ.
ಶನಿವಾರ ಶಾಸಕಿ ಅಂಜಲಿ ನಿಂಬಾಳಕರ್ ಪ್ರತಿಭಟನಾ ಧರಣಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ