Kannada NewsKarnataka NewsLatest

*ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ*

*ಅಧ್ಯಕ್ಷರಾಗಿ ಶಿವಕುಮಾರ್ ಮೇಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಪಾಗೋಜಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಿವಕುಮಾರ್ ಮೇಟಿ ಪುನರಾಯ್ಕೆಯಾಗಿದ್ದಾರೆ.

Home add -Advt


ಉಪಾಧ್ಯಕ್ಷರಾಗಿ ಬಸವರಾಜ ಬೀಳೂರು, ನೆಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಪಾಗೋಜಿ, ಬಸಯ್ಯ ನಂದಿಕೋಲ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿಯಾಗಿ ತೋಟಪ್ಪ ಶೇಖ, ಖಜಾಂಚಿಯಾಗಿ ಜಯಪ್ರಕಾಶ ಜಾಲಿಗಿಡದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿವೃತ್ತ ಡಿಜಿಪಿ ಶಂಕರ ಬಿದಿಯವರು ಸಂಘದ ಗೌರವಾಧ್ಯಕ್ಷರಾಗಿ ಮುಂದುವರೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Back to top button