Film & EntertainmentKannada NewsKarnataka NewsLatest
*ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.
ಫೇಸ್ ಬುಕ್ ಲೈವ್ ನಲ್ಲಿ ಮಾತನಾಡುವಾಗ ನಟ ಉಪೇಂದ್ರ ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವವರು ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿದ್ದರು. ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಉಪೇಂದ್ರ ತಮ್ಮ ವಿಡಿಯೋ ಡಿಲಿಟ್ ಮಾಡಿ, ಅರಿವಿಗೆ ಬರದೇ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ಕ್ಷಮೆಯಾಚಿಸುವುದಾಗಿ ತಿಳಿಸಿದ್ದರು. ಅಲ್ಲದೇ ವಿಡಿಯೋ ಡಿಲಿಟ್ ಮಾಡಿದ್ದರು. ಆದರೂ ಕೂಡ ನಟನ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.


