Film & EntertainmentKannada NewsKarnataka NewsLatestPolitics
*ನಟ ಉಪೇಂದ್ರಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಅಟ್ರಾಸಿಟಿ ಕೇಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಫೇಸ್ ಬುಕ್ ಲೈವ್ ವಿಡಿಯೋದಲ್ಲಿ ಮಾತನಾಡುವಾಗ ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು, ಒಂದು ಸಮಾಜವನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಜಾತಿ ನಿಂದನೆ ಆರೋಪದಡಿ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ತಡೆ ನೀಡುವಂತೆ ಕೋರಿ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಉಪೇಂದ್ರ ಪರ ಆದೇಶ ನೀಡಿದ್ದು, ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ತಡೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ