*ರೈತರಿಗೆ ಸಮಾಧಾನಕರ ಸುದ್ದಿ; ಕೃಷ್ಣಾ ಮೇಲ್ದಂಡೆ ವ್ಯಾಪ್ತಿಯಲ್ಲಿ ನೀರು ಬಿಡಲು ನಿರ್ಧಾರ*
ಮೆಣಸಿನಕಾಯಿ ಬೆಳೆ ಉಳಿಸಲು 2.75 ಟಿಎಂಸಿ ನೀರು ಹರಿಸಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು.
ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನದಲ್ಲಿ ನೀರು ತಲುಪಬಹುದು.
“ನಿನ್ನೆ ರಾತ್ರಿ ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಭಾಗದ ಜಿಲ್ಲಾ ಮಂತ್ರಿಗಳು, ಎಲ್ಲ ಪಕ್ಷದ ಶಾಸಕರು, ರೈತ ಮುಖಂಡರ ಜೊತೆ ಸಭೆ ಮಾಡಲಾಯಿತು. ಈ ಸಭೆಯಲ್ಲಿ ಜನಪ್ರತಿನಿಧಿಗಳು ವಾಸ್ತವ ಪರಿಸ್ಥಿತಿ ವಿವರಿಸಿ, ನೀರು ಬಿಡಲು ಒತ್ತಾಯಿಸಿದರು.
ರಾಜ್ಯದ ಇತಿಹಾಸದಲ್ಲೇ ಈ ಬಾರಿ ಅತ್ಯಂತ ದೊಡ್ಡ ಪ್ರಮಾಣದ ಬರಗಾಲ ಎದುರಾಗಿದೆ. ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ