Kannada NewsKarnataka NewsLatestPolitics

*ಕೃಷ್ಣ ಮೇಲ್ದಂಡೆ ಯೋಜನೆ; ರೈತರಿಂದ ವಶಪಡಿಸಿಕೊಂಡ ಭೂಮಿಗೆ ಪರಿಹಾರ, ಪುನರ್ವಸತಿ ವಿಚಾರ ಡಿಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ವಿಚಾರವಾಗಿ ಡಿಸಿಎ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ನೀಡಬೇಕು. ಅಲ್ಲದೆ ಈ ನೀರಾವರಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ನೀಡುವ ಹಾಗೂ ಪುನರ್ವಸತಿ ಕೇಂದ್ರಗಳ ಕಾಮಗಾರಿ ಮತ್ತೆ ಚಾಲನೆ ನೀಡುವ ವಿಚಾರವಾಗಿ ಪರಿಷತ್ ಸದಸ್ಯರಾದ ರುದ್ರಪ್ಪ ನಿರಾಣಿ ವಿಷಯ ಪ್ರಸ್ತಾಪಿಸಿದರು.

ಇದಕ್ಕೆ ಉತ್ತರ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸದಸ್ಯರು ಹೇಳಿದ ಮಾತು ಸತ್ಯವಿದೆ. ಸಂತ್ರಸ್ತರಿಗೆ ಎಷ್ಟು ಹಣ ನೀಡಬೇಕು ಎಂಬುದರ ಬಗ್ಗೆ ಬಹಳ ದಿನಗಳಿಂದ ತೀರ್ಮಾನ ಆಗಬೇಕಿತ್ತು. ಬಾಗಲಕೋಟೆ ಭಾಗದಲ್ಲಿ 2-3 ಲಕ್ಷ ಇದ್ದರೂ 10-15 ಲಕ್ಷಕ್ಕೆ ಮಾಡಲಾಗಿತ್ತು. ಹೀಗಾಗಿ ಸಮಸ್ಯೆ ಆಗಿತ್ತು.

ನಾವು ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಅನ್ನು ಸ್ವಲ್ಪ ಮಾರ್ಪಾಡು ಮಾಡಿ ಮಂಡಿಸಿದ್ದೇವೆ. ಹೀಗಾಗಿ ಈ ವರ್ಷ ಇದಕ್ಕೆ ಹಣ ನೀಡಲು ಆಗುತ್ತಿಲ್ಲ. ಆದರೂ ಇದು ಆದ್ಯತೆ ಯೋಜನೆ ಆಗಿದ್ದು, ನಾನು ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಬಾಕಿ ಇರುವ ಅಧಿಸೂಚನೆ ಸರಿಪಡಿಸುವಂತೆ ಮನವಿ ಮಾಡಿದ್ದೇನೆ. ಸದನ ಮುಗಿಯುವ ಒಳಗೆ ಈ ವಿಚಾರವಾಗಿ ಮಾತನಾಡಲು ಸಭೆ ಮಾಡುತ್ತೇನೆ. ನಿಮ್ಮನ್ನು ಸೇರಿದಂತೆ ಈ ಭಾಗದ ನಾಯಕರನ್ನು ಆಹ್ವಾನಿಸಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಆ ಸಭೆಯಲ್ಲಿ ನಿಮ್ಮ ಸಲಹೆಗಳನ್ನು ಹಂಚಿಕೊಳ್ಳಿ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button