Kannada NewsKarnataka News

ಕಾವೇರಿ ವಿಚಾರವಾಗಿ ನಾಳೆ ತುರ್ತು ಸರ್ವಪಕ್ಷ ಸಭೆ, ದಿಲ್ಲಿಗೆ ತೆರಳಿ ಕೇಂದ್ರಕ್ಕೆ ಮನವಿ : ಡಿಸಿಎಂ ಡಿ.ಕೆ. ಶಿವಕುಮಾರ್

*ಪ್ರಗತಿವಾಹಿನಿ ಸುದ್ದಿ, ಬೆಂಗಳೂರು*

“ಕಾವೇರಿ ನದಿ ನೀರು ವಿಚಾರವಾಗಿ ಚರ್ಚೆ ಮಾಡಲು ನಾಳೆ ತುರ್ತು ಸರ್ವಪಕ್ಷ ಸಭೆ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ, ಸಚಿವರು, ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳ ಜೊತೆ ಸಭೆ ಬಳಿಕ ಮಂಗಳವಾರ ರಾತ್ರಿ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

“ಕಾವೇರಿ ವಿಚಾರವಾಗಿ ಚರ್ಚೆ ಮಾಡಲು ಸರ್ವಪಕ್ಷ ಸಭೆ ಕರೆಯಲಾಗಿದೆ. ಹಿರಿಯ ನಾಯಕರು, ಸಂಸದರು, ಸಚಿವರನ್ನು ಸಭೆಗೆ ಆಹ್ವಾನಿಸಲಾಗಿದೆ.

Home add -Advt

ನಾಳೆ ದೆಹಲಿಗೆ ತೆರಳುತ್ತಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಸಂಕಷ್ಟ ಪರಿಸ್ಥಿತಿ ಬಗ್ಗೆ ಮನವಿ ಸಲ್ಲಿಸುತ್ತೇನೆ.

ನಮ್ಮಲ್ಲಿ ನೀರಿದ್ದರೆ ಅದನ್ನು ಬಿಡಲು ಯಾವುದೇ ಅಭ್ಯಂತರವಿರಲಿಲ್ಲ. ಆದರೆ ನಮಗೆ ನೀರಿನ ಹೆಚ್ಚಿನ ತೊಂದರೆ ಎದುರಾಗಿದೆ. ನಮ್ಮಲ್ಲಿ ಮಳೆ ಕೊರತೆ ಎದುರಾಗಿದ್ದು, ನೀರು ಇಲ್ಲವಾಗಿದೆ. ಕುಡಿಯುವ ನೀರು ಶೇಖರಣೆ ನಮ್ಮ ಮೊದಲ ಆದ್ಯತೆಯಾಗಿದೆ. ನಮ್ಮ ಪರಿಸ್ಥಿತಿ ಕುರಿತಾಗಿ ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ”ಎಂದು ತಿಳಿಸಿದರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button