Kannada NewsKarnataka NewsLatest

ಘಟಪ್ರಭಾ ನದಿ ತೀರದಲ್ಲಿ 108 ಅಡಿ ಬಸವಣ್ಣ ಪ್ರತಿಮೆ ; ಸಿಎಂ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಘಟಪ್ರಭಾ ನದಿ ತೀರದಲ್ಲಿ 108 ಅಡಿ ಎತ್ತರದ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಸೂಕ್ತ ಆದೇಶ ಹೊರಡಿಸಲಾಗುತ್ತಿದ್ದು, ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವಾಗಿಸುವುದು ಸರಕಾರದ ಉದ್ದೇಶವಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಬಸವೇಶ್ವರ ವೃತ್ತದ ಬಳಿಯ ತಿನಿಸುಕಟ್ಟೆ (ಖಾವುಕಟ್ಟಾ) ಬಳಿ ಶ್ರೀ ಬಸವೇಶ್ವರ ಪ್ರತಿಮೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿ ವಚನಗಳ ಮೂಲಕ ಇಡೀ ಜಗತ್ತಿಗೆ ಸನ್ಮಾರ್ಗ ತೋರಿದ್ದಾರೆ. ಅವರ ವಿಚಾರಧಾರೆಗಳು ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿವೆ. ‘ವಿಶ್ವದ ಮೊದಲ ಸಂಸತ್ತು’ ಎಂಬ ಹೆಗ್ಗಳಿಕೆಯ ಅನುಭವ ಮಂಟಪವನ್ನು ಸ್ಥಾಪಿಸಿದ ಅವರು, ಅಲ್ಲಿ ಚರ್ಚಿಸುತ್ತಿದ್ದ ವಿಷಯಗಳು ಸರ್ವಕಾಲಿಕ ಪ್ರಸ್ತುತವೆನಿಸಿವೆ. ಎಲ್ಲಿಯವರೆಗೆ ಸ್ವತಃ ಬಸವಣ್ಣನವರು ವಿರೋಧಿಸಿದ್ದ ಅಸಮಾನತೆ, ಲಿಂಗಭೇದ, ಮೂಢನಂಬಿಕೆಯಂಥ ಅನಿಷ್ಟ ಪದ್ಧತಿಗಳ ವಿಷಯದಲ್ಲಿ ಸಮಾಜದಲ್ಲಿ ಮೂಡುವುದಿಲ್ಲವೋ, ಅಲ್ಲಿಯವರೆಗೆ ಬಸವಣ್ಣನವರು ಪ್ರಸ್ತುತರಾಗಿರುತ್ತಾರೆ” ಎಂದರು.

“ಬೆಳಗಾವಿಯಲ್ಲಿ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಿರುವುದು ಅತ್ಯಂತ ಸಂತೋಷದ ಸಂಗತಿ ಎಂದ ಬೊಮ್ಮಾಯಿ, ನಮ್ಮ ದೇಶಕ್ಕೆ ಚರಿತ್ರೆ ಇದೆ, ಚಾರಿತ್ರ್ಯ ಬೇಕಾಗಿದೆ, ಸಂಘರ್ಷವಿದೆ, ಸಮನ್ವಯ ಬೇಕಾಗಿದೆ. ಸಾಮಾಜಿಕ ಪರಿವರ್ತನೆಯಾಗುವಂತಹ, ವೈಚಾರಿಕವಾಗಿ ಮುನ್ನಡೆಯಲು ಬಸವ ತತ್ವಗಳು ಪ್ರೇರಣೆ ನೀಡುತ್ತವೆ. ಹೀಗಾಗಿ ಸಮಾಜದಲ್ಲಿ ಪ್ರತಿಯೊಬ್ಬರೂ ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸಬೇಕು” ಎಂದರು.

ನಿಡಸೋಸಿ ಶ್ರೀಗಳು, ಸಿದ್ಧರಾಮ ಸ್ವಾಮಿಗಳು, ಅಲ್ಲಮಪ್ರಭು ಸ್ವಾಮಿಗಳು ಸೇರಿದಂತೆ ವಿವಿಧ ಮಠಾಧೀಶರು, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಭಯ್ ಪಾಟೀಲ್, ಅನಿಲ ಬೆನಕೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಾಂತೇಶ ಕವಟಗಿಮಠ, ಎಂ.ಬಿ.ಝಿರಲಿ ಮತ್ತಿತರರು ಉಪಸ್ಥಿತರಿದ್ದರು.

https://pragati.taskdun.com/d-k-shivakumarbelagavimaharashtra-govtcm-basavaraj-bommai/
https://pragati.taskdun.com/cm-basavaraj-bommaid-k-shivakumarbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button