Karnataka News

*24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಮೀನುಗಾರರು ಸಮುದ್ರಕ್ಕೆ ಇಳಿಯಂತೆ‌ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದ ಹಲವೆಡೆ ಈಗಾಗಲೇ ಪೂರ್ವ ಮುಂಗಾರು ಮಳೆ ಆರಂಭವಾಗಿದ್ದು, ಇದೀಗ ಇದರ ನಡುವೆಯೇ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ 21, 22 ರಂದು ಆಲಿಕಲ್ಲು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Home add -Advt

ಇನ್ನು ಇದೇ ತಿಂಗಳು 24 ರಿಂದ 26ರ ವರೆಗೆ ದಕ್ಷಿಣ ಕರ್ನಾಟಕ, ಹಾಗೂ ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳಿಕ ಒಂದು ವಾರಗಳ ಕಾಲ ರಾಜ್ಯದ 24 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ‌ ಎಚ್ಚರಿಕೆ ನೀಡಲಾಗಿದೆ.

Related Articles

Back to top button