ಪ್ರಗತಿವಾಹಿನಿ ಸುದ್ದಿ; ಕಲರಾಡೋ: ಅಮೇರಿಕಾದ ಸೂಪರ್ ಮಾರ್ಕೆಟ್ ವೊಂದರಲ್ಲಿ ಫೈರಿಂಗ್ ನಡೆದಿದ್ದು, ದುಷ್ಕರ್ಮಿ ನಡೆಸಿದ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ ಸೇರಿ 10 ಜನರು ಸಾವನ್ನಪ್ಪಿದ್ದಾರೆ.
ಡೆನ್ವರ್ ಸಮೀಪದ ಬೌಲ್ಡರ್ ನಲ್ಲಿರುವ ಕಿಂಗ್ ಸೂಪರ್ಸ್ ಸೂಪರ್ ಮಾರ್ಕೆಟ್ ನಲ್ಲಿ ಈಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಮೇಲೂ ದುಷ್ಕರ್ಮಿ ಫೈರಿಂಗ್ ಮಾಡಿದ್ದಾನೆ. ಪರಿಣಾಮ ಎರಿಕ್ ಟ್ಯಾಲಿ ಎಂಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಏಕಾಏಕಿ ಸೂಪರ್ ಮಾರ್ಕೆಟ್ ನಲ್ಲಿ ಗುಂಡಿನ ದಾಳಿ ನಡೆಸಲು ಕಾರಣವೇನು ಎಂದು ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ