Kannada NewsLatestWorld

*ಹಾರ್ಮುಜ್ ಜಲಸಂಧಿ ಬಳಿ ಅಮೆರಿಕಾ ಸೇನಾ ಹೆಲಿಕಾಪ್ಟರ್ ಪತನ*

ಪ್ರಗತಿವಾಹಿನಿ ಸುದ್ದಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮತ್ತೆ ಯುದ್ಧ ಆರಂಭವಾಗಿರುವ ನಡುವೆಯೇ ಅಮೆರಿಕ ಸೇನೆಗೆ ಸೇರಿದ ಅಪಾಚೆ ಗನ್‌ಶಿಪ್ ಹೆಲಿಕಾಪ್ಟರ್ ಹಾರ್ಮುಜ್ ಜಲಸಂಧಿಯಲ್ಲಿ ಪತನಗೊಂಡಿದೆ.

Home add -Advt

ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾಹಿತಿ ನೀಡಿದ್ದು, ಅಮೆರಿಕ ಸೇನೆ ಹೆಲಿಕಾಪ್ಟರ್ ಪತನಗೊಂಡಿದೆ. ಆದರೆ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರ ಆರೋಗ್ಯವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಇರಾನ್ ದಾಳಿಯಿಂದ ಸಂಭವಿಸಿದೆಯೇ ಅಥವಾ ತಾಂತ್ರಿಕ ದೋಷದಿಂದ ಕೆಳಗೆ ಅಪ್ಪಳಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗಿರುವ ಸಮಯದಲ್ಲೇ ಈ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

AH-64 ಅಪಾಚೆ ಹೆಲಿಕಾಪ್ಟರ್ ಅಮೆರಿಕ ಸೇನೆಯ ಪ್ರಮುಖ ಯುದ್ಧ ಅಸ್ತ್ರಗಳಲ್ಲಿ ಒಂದಾಗಿದೆ. ಹೆಲ್‌ಫೈರ್ ಕ್ಷಿಪಣಿಗಳಿಂದ ಸಜ್ಜುಗೊಂಡಿರುವ ಈ ಹೆಲಿಕಾಪ್ಟರ್ ಅನ್ನು ಅಮೆರಿಕ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಬಳಸುತ್ತಿದೆ.

Related Articles

Back to top button