ಪ್ರಗತಿವಾಹಿನಿ ಸುದ್ದಿ: ಅಮೆರಿಕಾದಲ್ಲಿ ಭಾರತಕ್ಕೆ ರಾಜತಾಂತ್ರಿಕ ಗೆಲುವಾಗಿದೆ. 26/11 ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕಾ ನಿರ್ಧರಿಸಿದೆ.
26/11ರ ಪ್ರಕರಣ, ಡೆನ್ಮಾರ್ಕ್ ನಲ್ಲಿ ದಾಳಿಯ ಸಂಚು ಪ್ರಕರಣ ಹಿನ್ನೆಲೆಯಲ್ಲಿ ಉಗ್ರ ತಹಾವೂರ್ ರಾಣಾ ಅಮೆರಿಕಾದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ. 14 ವರ್ಷ ಜೈಲು ಶಿಕ್ಷೆ ವಿಧಿಸಿ ಅಮೆರಿಕ ಕೋರ್ಟ್ ಆದೇಶ ಹೊರಡಿಸಿದೆ. ಅಪರಾಧಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮಿತಿ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ