ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಶುಕ್ರವಾರ (ಜು.೫) ರಂದು ನಗರಕ್ಕೆ ಭೇಟಿ ನೀಡಿ, ಮಹಾನಗರ ಪಾಲಿಕೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ವಿವಿಧ ಇಲಾಖೆಗಳ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಸಚಿವರು ಜುಲೈ ೫ ರಂದು ಬೆಳಿಗ್ಗೆ ೮.೩೫ ಗಂಟೆಗೆ ಬೆಳಗಾವಿಗೆ ಆಗಮಿಸುವರು. ಬೆಳಗ್ಗೆ ೯ ಗಂಟೆಯಿಂದ ೧೦ ಗಂಟೆಯವರೆಗೆ ಸ್ಮಾಟ್ ಸಿಟಿ(ಕೆ.ಯು.ಐ.ಡಿ.ಎಫ್.ಸಿ) ಮಹಾನಗರ ಪಾಲಿಕೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ೧೧ ಗಂಟೆಯವರೆಗೆ ಬೆಳಗಾವಿ ಸ್ಮಾರ್ಟ್ ಸಿಟಿ-ಅನುಷ್ಟಾನ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ ಜರುಗಲಿದೆ.
ಬೆಳಿಗ್ಗೆ ೧೧ ಗಂಟೆಯಿಂದ ೧೨ ಗಂಟೆಯವರೆಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಸಾರ್ವಜನಿಕ ಸಂಪರ್ಕ ಸಭೆಯು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಮಧ್ಯಾಹ್ನ ೧೨ ಗಂಟೆಯಿಂದ ೨ ಗಂಟೆಯವರೆಗೆ ಬೆಳಗಾವಿ ಮಹಾನಗರ ಪಾಲಿಕೆ ಪರಿಶೀಲನಾ ಸಭೆ, ಮಧ್ಯಾಹ್ನ ೨.೩೦ ಗಂಟೆಯಿಂದ ೩.೩೦ ಗಂಟೆಯವರೆಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಸಾರ್ವಜನಿಕ ಸಭೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜರುಗಲಿದೆ.
ಮಧ್ಯಾಹ್ನ ೩.೩೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ, ಸಂಜೆ ೫ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕೆ.ಯು.ಐ.ಡಿ.ಎಫ್.ಸಿ ಪ್ರಗತಿ ಪರಿಶೀಲನಾ ಸಭೆಗಳನ್ನು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಜೆ ೬ ಗಂಟೆಯಿಂದ ಸಂಜೆ ೭ ಗಂಟೆ ವರೆಗೆ ಕಾಂಗ್ರೇಸ್ ಪಾರ್ಟಿ ಕಚೇರಿಗೆ ಭೇಟಿ ನೀಡುವರು. ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ. ಹೊಡುವರು.
ಜುಲೈ ೬ ರಂದು ಬೆಳಿಗ್ಗೆ ೭ ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣ ಬೆಳೆಸುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ