Kannada NewsKarnataka NewsLatest

ಬೆಳಗಾವಿಗೆ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ನಗರಾಭಿವೃದ್ಧಿ ಸಚಿವ  ಯು.ಟಿ. ಖಾದರ್ ಅವರು ಶುಕ್ರವಾರ (ಜು.೫) ರಂದು ನಗರಕ್ಕೆ ಭೇಟಿ ನೀಡಿ, ಮಹಾನಗರ ಪಾಲಿಕೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ವಿವಿಧ ಇಲಾಖೆಗಳ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಸಚಿವರು ಜುಲೈ ೫ ರಂದು ಬೆಳಿಗ್ಗೆ ೮.೩೫ ಗಂಟೆಗೆ ಬೆಳಗಾವಿಗೆ ಆಗಮಿಸುವರು. ಬೆಳಗ್ಗೆ ೯ ಗಂಟೆಯಿಂದ ೧೦ ಗಂಟೆಯವರೆಗೆ ಸ್ಮಾಟ್ ಸಿಟಿ(ಕೆ.ಯು.ಐ.ಡಿ.ಎಫ್.ಸಿ) ಮಹಾನಗರ ಪಾಲಿಕೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು.

Home add -Advt

 ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ೧೧ ಗಂಟೆಯವರೆಗೆ ಬೆಳಗಾವಿ ಸ್ಮಾರ್ಟ್ ಸಿಟಿ-ಅನುಷ್ಟಾನ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ ಜರುಗಲಿದೆ.
ಬೆಳಿಗ್ಗೆ ೧೧ ಗಂಟೆಯಿಂದ ೧೨ ಗಂಟೆಯವರೆಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಸಾರ್ವಜನಿಕ ಸಂಪರ್ಕ ಸಭೆಯು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಮಧ್ಯಾಹ್ನ ೧೨ ಗಂಟೆಯಿಂದ ೨ ಗಂಟೆಯವರೆಗೆ ಬೆಳಗಾವಿ ಮಹಾನಗರ ಪಾಲಿಕೆ ಪರಿಶೀಲನಾ ಸಭೆ, ಮಧ್ಯಾಹ್ನ ೨.೩೦ ಗಂಟೆಯಿಂದ ೩.೩೦ ಗಂಟೆಯವರೆಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಸಾರ್ವಜನಿಕ ಸಭೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜರುಗಲಿದೆ.
ಮಧ್ಯಾಹ್ನ ೩.೩೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ, ಸಂಜೆ ೫ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕೆ.ಯು.ಐ.ಡಿ.ಎಫ್.ಸಿ ಪ್ರಗತಿ ಪರಿಶೀಲನಾ ಸಭೆಗಳನ್ನು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಜೆ ೬ ಗಂಟೆಯಿಂದ ಸಂಜೆ ೭ ಗಂಟೆ ವರೆಗೆ ಕಾಂಗ್ರೇಸ್ ಪಾರ್ಟಿ ಕಚೇರಿಗೆ ಭೇಟಿ ನೀಡುವರು. ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ. ಹೊಡುವರು.
ಜುಲೈ ೬ ರಂದು ಬೆಳಿಗ್ಗೆ ೭ ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣ ಬೆಳೆಸುವರು.

Related Articles

Back to top button