Kannada NewsKarnataka NewsLatest

ಸುವರ್ಣ ವಿಧಾನಸೌಧವನ್ನು ಜನರ ಜೀವ ಉಳಿಸುವ ಸಾರ್ಥಕ ಕಾರ್ಯಕ್ಕೆ ಬಳಸಿಕೊಳ್ಳಿ – ಅಂಜಲಿ ನಿಂಬಾಳಕರ್ ಪತ್ರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುವ್ರಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ ಮುಖ್ಯಮಂತ್ರ ಿಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಗತಿವಾಹಿನಿ ಬುಧವಾರ ಈ ಕುರಿತು ವರದಿ ಪ್ರಕಟಿಸಿತ್ತು. ( ಸುವರ್ಣ ವಿಧಾನಸೌಧವನ್ನೇಕೆ ಕೊರೋನಾ ಕೇರ್ ಸೆಂಟರ್ ಮಾಡಬಾರದು?)

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸುತ್ತಿದೆ. ಇದರಲ್ಲಿ ಸೋಂಕಿಗೆ ಒಳಗಾಗಿ ಉಸಿರಾಟ ಸೇರಿ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೇ ವ್ಯರ್ಥವಾಗಿ ಕೋಟ್ಯಾಂತರ ರೂಪಾಯಿ ವೆಚ್ಛ ಮಾಡಿ ನಿರ್ವಹಣೆ ಮಾಡುತ್ತಿರುವ ಬೆಳಗಾವಿಯ ಸುವರ್ಣಸೌಧವನ್ನು ಇಂತಹ ಸಂದರ್ಭದಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಅವರು ಹೇಳಿದ್ದಾರೆ.

ಸಾವಿರಾರು ರೋಗಿಗಳಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡುವಷ್ಟು ವಿಶಾಲವಾಗಿರುವ ಸುವರ್ಣಸೌಧದಲ್ಲಿ ಕೂಡಲೇ ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಲಕರಣೆಗಳನ್ನು ಅಳವಡಿಸಿ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಬೆಳಗಾವಿ ಜಿಲ್ಲೆ ಮತ್ತು ಉತ್ತರ ಕರ್ನಾಟಕ ಭಾಗದ ರೋಗಿಗಳಿಗೆ ಬೆಡ್ ಸೌಲಭ್ಯ ಕಲ್ಪಿಸಿ ಚಿಕಿತ್ಸೆ ನೀಡಬೇಕು. ಆ ಮೂಲಕ ರಾಜ್ಯ ಜನರ ತೆರಿಗೆ ಹಣದಿಂದ ನಿರ್ಮಿಸಲ್ಪಟ್ಟಿರುವ ಸುವರ್ಣ ವಿಧಾನಸೌಧವನ್ನು. ಇಂತಹ ತುರ್ತು ಪರಿಸ್ಥಿತಿಯಲ್ಲಿ ಜನರ ಜೀವ ಉಳಿಸುವ ಸಾರ್ಥಕ ಕಾರ್ಯಕ್ಕೆ ಬಳಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button